Test Title
1 month, 1 week agoSub Heading
'ಕಾಂತಾರ: ಚಾಪ್ಟರ್ 1' ಚಿತ್ರವು ವಿಶ್ವಮಟ್ಟದಲ್ಲಿ ಭಾರಿ ಯಶಸ್ಸು ಕಂಡು, ಸಾವಿರ ಕೋಟಿ ಗಳಿಕೆಯತ್ತ ಸಾಗುತ್ತಿದೆ. ರಿಷಬ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ IMDB ಇಂಡಿಯಾ ಟ್ರೆಂಡಿಂಗ್ನಲ್ಲಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದಿದ್ದಾರೆ. ಪ್ರೇಕ್ಷಕರ ನಿರೀಕ್ಷೆ ಮೀರಿ ಗೆದ್ದಿರುವ ಈ ಸಿನಿಮಾ, ಇಬ್ಬರ ಪಾತ್ರಗಳ ಮೂಲಕ ಮತ್ತಷ್ಟು ತೂಕ ಪಡೆದಿದೆ.
Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್ ಡಾಕ್ಟರ್ನನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜನರಲ್ ಸರ್ಜನ್ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅನಾರೋಗ್ಯ ಸಮಸ್ಯೆ ಇದ್ದ ಕಾರಣ ಈತ ಕೊಲೆ ಮಾಡಿದ್ದಾನೆ ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.
ನೆರೆ ರಾಜ್ಯ ತಮಿಳುನಾಡಿನಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್ ಮನೆ ಬಳಿಕ ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ಹುಸಿಬಾಂಬ್ ಬೆದರಿಕೆ ಹಾಕಲಾಗಿದೆ. ವಾರದ ಹಿಂದೆ ಇಂತಹುದೆ ಪ್ರಕರಣ ತಮಿಳುನಾಡಿನ ಮದುರವೋಯಲ್ನಲ್ಲಿ ವರದಿಯಾಗಿತ್ತು. ಪಾರ್ಕ್ ಮತ್ತು ದೇಗುಲದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಎರಡು ವರ್ಷಗಳಿಂದ ಸಂಬಳ ಸಿಗದೆ ಬೇಸತ್ತಿದ್ದ ವಾಟರ್ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಹೊಂಗನೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಭಾನು ಮುಷ್ತಾಕ್ ಅವರು ಇಂದು ಕುಟುಂಬ ಸಮೇತರಾಗಿ ಹಾಸನಾಂಬೆಯ ದರ್ಶನ ಪಡೆದುಕೊಂಡರು. ಬಳಿಕ ಮಾತನಾಡಿರುವ ಅವರು, ಇದು ನನಗೆ ಮೊದಲೇನಲ್ಲ, ನನ್ನ ತಾಯಿ ಕೈಹಿಡಿದು ಬರುತ್ತಿದ್ದಾಗಿನಿಂದ ನೋಡಿದ್ದೇನೆ ಎಂದು ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕಿದರು.